ಉಡುಪಿ:ಕಡಲ್ಕೊರೆತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Views: 69
ಉಡುಪಿ :ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯಲ್ಲಿ 55 ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಹೇಳಿದರು.
ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿದ ಭಾರಿ ಮಳೆಯಿಂದ ಉಡುಪಿ ಜಿಲ್ಲೆಯಲ್ಲಿ ಅವರು ಇಂದು ಉಡುಪಿ ಜಿಲ್ಲೆಯ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಜ್ಜರಬೆಟ್ಟು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ ಚರ್ಚಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ, ಇಂದು ಸಂಜೆಯವರೆಗೂ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಉಡುಪಿಯಲ್ಲಿ ಇದ್ದು ನೆರೆಹಾನಿ ನೋಡುವಂತೆ ಜನರು ಬೇಡಿಕೆ ಇಟ್ಟಿದ್ದಾರೆ. ನಾನು ಇಲ್ಲೇ ಮನೆ ಮಾಡಿ ನೆಲೆಸಲು ತಯಾರಿದ್ದೇನೆ. ದಿನದ 24 ಗಂಟೆಗಳ ಕಾಲ ಜಿಲ್ಲಾಡಳಿತ, ಸರಕಾರ ಎಚ್ಚರವಾಗಿದೆ. ಎಲ್ಲೂ ಯಾವ ತೊಂದರೆ ಆಗಬಾರದು. ಪ್ರಾಣ ಹಾನಿ ಆಗಬಾರದು ಎಂದು ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದೇವೆ ಎಂದರು.
ತಕ್ಷಣ 5 ಕೋಟಿ ರೂ. ಬಿಡುಗಡೆಗೆ ಮನವಿ ಮಾಡಿದ್ದೇವೆ ಎಂದು ಭರವಸೆ ನೀಡಿದರು.