ಕರಾವಳಿ

ಉಡುಪಿ:ತಂದೆಯನ್ನು ಆಸ್ಪತ್ರೆಗೆ ದಾಖಲಿಸಿ ಕಾರಿನಲ್ಲಿ ಮಲಗಿದ್ದ ಮಗ ಉಸಿರುಗಟ್ಟಿ ಸಾವು

Views: 292

ಉಡುಪಿ:ತಂದೆಯನ್ನು ಚಿಕಿತ್ಸೆಗೆ ದಾಖಲಿಸಿ ಮಣಿಪಾಲ ಆಸ್ಪತ್ರೆ ಬಳಿ ಕಾರಿನ ಎಲ್ಲಾ ಗ್ಲಾಸ್‌ಗಳನ್ನು ಮುಚ್ಚಿಕೊಂಡು ಮಲಗಿದ್ದ ಮಗ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಗುರುರಾಜ್ (32) ಮೃತಪಟ್ಟವರು.ನಿನ್ನೆ ಅಣ್ಣನ ಸ್ನೇಹಿತನೊಂದಿಗೆ ತನ್ನ ತಂದೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ರಾತ್ರಿ ಕಾರಿನಲ್ಲಿ ಮಲಗಿ ಬೆಳಗಾಗುವಷ್ಟರಲ್ಲೇ ಸಾವನ್ನಪ್ಪಿದ್ದಾರೆ.

ಗುರುರಾಜ್ ತನ್ನ ತಂದೆಯನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಇಲ್ಲದ ಹಿನ್ನೆಲೆ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ತನ್ನದೇ ಕಾರಿನಲ್ಲಿ ಗ್ಲಾಸ್ ಮುಚ್ಚಿ ಎಸಿ ಹಾಕಿಕೊಂಡು ಮಲಗಿದ್ದರು.

ಬೆಳಗಾಗುವಷ್ಟರಲ್ಲೇ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಉಸಿರುಗಟ್ಟಿ ಸಾವನ್ನಪ್ಪಲು ನಿಖರ ಕಾರಣ ಮರಣೋತ್ತರ ವರದಿ ಬಳಿಕವಷ್ಟೇ ತಿಳಿಯಲಿದೆ. ಈ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Back to top button