ಕರಾವಳಿ

ಉಡುಪಿ:ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ ಮತ್ತು ದಂಡ

Views: 0

ಉಡುಪಿ : ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪಿ ಅತುಲ್ ರಾವ್ ಗೆ ಉಡುಪಿ ಜಿಲ್ಲಾ ನ್ಯಾಯಾಲಯ ಒಂದು ವರ್ಷ ಜೈಲು ಮತ್ತು ದಂಡ ವಿಧಿಸಲಾಗಿದೆ.

ಉಡುಪಿ ಜಿಲ್ಲಾ ಸಿಜೆಎಂ ನ್ಯಾಯಾಲಯದಿಂದ ಶುಕ್ರವಾರ ಮಹತ್ವದ ಆದೇಶ ನೀಡಿದೆ .

15 ವರ್ಷದ ಹಿಂದೆ ಜೂನ್ 10, 2008 ರಂದು ಈ ಪ್ರಕರಣ ನಡೆದಿತ್ತು ‌ ಮೋಸ, ವಂಚನೆ ,ನಕಲಿ ದಾಖಲೆ ಸೃಷ್ಟಿ ಆರೋಪದಡಿ ದೂರು ದಾಖಲಾಗಿತ್ತು,

ಏನಿದು ಪ್ರಕರಣ?

ಮಾಜಿ ಶಾಸಕ ರಘುಪತಿ ಭಟ್ ಅವರ ಪತ್ನಿ ಪದ್ಮಪ್ರಿಯ ಅವರು 2008ರ ಜೂನ್ 10 ರಂದು ಕರಂಬಳ್ಳಿಯ ಮನೆಯಿಂದ ನಾಪತ್ತೆಯಾಗಿದ್ದರು. ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ ಅದೇ ಊರಿನ ಅತುಲ್ ಭಟ್ ಮನೆಯಿಂದ ಪದ್ಮಪ್ರಿಯ ಅವರನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಕುಂಜಾರುಗಿರಿ ದಾರಿ ಮಧ್ಯೆ ಕಾರು ನಿಲ್ಲಿಸಿ ಮತ್ತು ಕಾರಿನೊಳಗೆ ಬಳೆಚೂರು ರಕ್ತದ ಕಲೆ ಮಾಡಿ ಅಪಹರಣದ ನಾಟಕವಾಡಿದ್ದ ಎಂದು ದೂರಲಾಗಿತ್ತು. ಕಾರನ್ನು ಅಲ್ಲೇ ಬಿಟ್ಟ ಅತುಲ್ ತನ್ನ ಕಾರಿನಲ್ಲಿ ಪದ್ಮಪ್ರಿಯ ಅವರನ್ನು ಕುಮಟಾದವರೆಗೆ ಕರೆದುಕೊಂಡು ಹೋಗಿದ್ದ.

ಕುಮಟಾಕ್ಕೆ ಬಾಡಿಗೆ ಚಾಲಕನನ್ನು ಕರೆಯಿಸಿ, ತನ್ನ ಕಾರನ್ನು ಬೆಂಗಳೂರಿಗೆ ಕಳಿಸಿಕೊಟ್ಟಿದ್ದ. ಇತ್ತ ಪದ್ಮಪ್ರಿಯ ಅವರನ್ನು ಅತುಲ್ ಭಟ್ ಬಾಡಿಗೆ ಕಾರಿನಲ್ಲಿ ಕುಮಟಾ ದಿಂದ ಗೋವಾ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ಅತುಲ್ ತನ್ನ ಪತ್ನಿ ಮೀರಾ ಅವರ ಡ್ರೈವಿಂಗ್ ಲೈಸೆನ್ಸ್ ಗೆ ಪದ್ಮಪ್ರಿಯ ಅವರ ಫೋಟೋ ಆಂಟಿಸಿ ಮೀರಾ ಹೆಸರಿನಲ್ಲಿ ಪದ್ಮಪ್ರಿಯ ಅವರನ್ನು ಗೋವಾ ವಿಮಾನ ನಿಲ್ದಾಣದ ಮೂಲಕ ದಿಲ್ಲಿಗೆ ಕರೆದು ಹೋಗಿದ್ದ, ಈ ಘಟನೆ ನಡೆಯುವ ಮೊದಲೇ ದಿಲ್ಲಿಗೆ ಹೋಗಿದ್ದ ಅತುಲ್ ಅಲ್ಲೊಂದು ಬಾಡಿಗೆ ಮನೆ ಪಡೆದಿದ್ದ.

ಜೂ. 10 ರಂದು ದಿಲ್ಲಿಗೆ ಹೋಗಿದ್ದ ಅತುಲ್ ಮರುದಿನ ಬೆಂಗಳೂರಿಗೆ ಬಂದು ಲಾಡ್ಜ್ ನಲ್ಲಿ ತಂಗಿದ್ದು, ಅಲ್ಲಿಂದ ಜೂನ್ 12ಕ್ಕೆ ಹೊರಟು ಮರುದಿನ ಉಡುಪಿಗೆ ತಲುಪಿ ರಘುಪತಿ ಭಟ್ ಜೊತೆ ಪದ್ಮಪ್ರಿಯ ಅವರನ್ನು ಹುಡುಕುವ ನಾಟಕ ಮಾಡಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೆಹಲಿಯಲ್ಲಿ ಪದ್ಮಪ್ರಿಯ ಅವರ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಅತುಲ್ ರಾವ್ ಪದ್ಮಪ್ರಿಯ ದೆಹಲಿಗೆ ತೆರಳಲು ಅನುಕೂಲ ಮಾಡಿಕೊಟ್ಟಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.

ಪ್ರಕರಣದಲ್ಲಿ ಮಣಿಪಾಲ ಠಾಣಾ ಪೊಲೀಸ್ ಹಾಗೂ ಸಿ ಓ ಡಿ ತನಿಖೆ ನಡೆಸಿದ್ದರು.2009ರಲ್ಲಿ ಅಂತಿಮ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು

ಅಂದು ಶಾಸಕರಾಗಿದ್ದ ರಘುಪತಿ ಭಟ್ ನೀಡಿದ ದೂರಿನ ಆಧಾರದಲ್ಲಿ ಪ್ರಕರಣ ದಾಖಲಾಗಿತ್ತು.

ಪದ್ಮಪ್ರಿಯ ಅಪಹರಣವಾಗಿದೆ ಎಂಬಂತೆ ಬಿಂಬಿಸಿ ಆಕೆಯನ್ನು ದೆಹಲಿಗೆ ಕರೆದೊಯ್ದಿದ್ದ ಅತುಲ್‌.ಪದ್ಮಪ್ರಿಯ ದೆಹಲಿಗೆ ತೆರಳಲು ಅತುಲ್ ನಕಲಿ ದಾಖಲೆ ಸೃಷ್ಟಿಸಿದ್ದ ಎಂದು ತಿಳಿಯಲಾಗಿದೆ.

ಈಗ ಈ ಪ್ರಕರಣದಲ್ಲಿ ಉಡುಪಿ ಜಿಲ್ಲಾ ನ್ಯಾಯಾಲಯ ಅತುಲ್ ರಾವ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ.

ಸಿಒಡಿ ಪರ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಶಿವಪ್ರಸಾದ್ ಆಳ್ವ ವಾದ ಮಂಡಿಸಿದ್ದರು

Related Articles

Back to top button
error: Content is protected !!