ಇತರೆ

ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿ ಪಲ್ಟಿ: ಇಬ್ಬರು ಸಾವು , 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

Views: 193

ಕನ್ನಡ ಕರಾವಳಿ ಸುದ್ದಿ: ಉಡುಪಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಐಷಾರಾಮಿ ಸುಗಮ ಟ್ರಾವೆಲ್ಸ್ ಬಸ್ ನಾಗಮಂಗಲದ ಲಾಂಕೋ ಟೋಲ್ ಗೇಟ್ ಸಮೀಪ ಹೆದ್ದಾರಿಯ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ.

ಇಬ್ಬರು ಮೃತಪಟ್ಟು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ಹೆದ್ದಾರಿಯ ನಾಗಮಂಗಲ ತಾಲೂಕಿನ ನೆಲ್ಲಿಗೆರೆ ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ಸಂಭವಿಸಿದೆ.

ಅತೀ ವೇಗವಾಗಿ ಬರ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಬಸ್ ನಲ್ಲಿದ್ದ ಬೆಂಗಳೂರಿನ ನಿವಾಸಿ ಕಸ್ತೂರಿ ಶಾನ್ ಬಾಗ್ (64ವ), ಬಸ್ ಕ್ಲೀನರ್ ಅಶೋಕ್ (25ವ) ಮೃತಪಟ್ಟಿದ್ದಾರೆ. ಬಸ್ನಲ್ಲಿದ್ದ 20 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಗಾಯಾಳುಗಳನ್ನು ಬೆಳ್ಳೂರು ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾವಿ.ಜೆ.ಶೋಭಾರಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು.

 

 

 

 

Related Articles

Back to top button
error: Content is protected !!