ಉಡುಪಿ:ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

Views: 218
ಉಡುಪಿ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿರುವ ಆರೋಪಿಯನ್ನು ಬಂಧಿಸಲಾಗಿದೆ.
ಭಟ್ಕಳದ ಶುರೈಮ್(22 )ಬಂಧಿತ ಆರೋಪಿ
ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ಉಡುಪಿ ಗುಡ್ಡೆಯಂಗಡಿಯ ಯುವತಿ ಬೆಂಗಳೂರಿನಿಂದ ಉಡುಪಿಗೆ ರೈಲಿನಲ್ಲಿ ಪ್ರಯಾಣಿಸುತ್ತಿರುವಾಗ ಮೂಲ್ಕಿ ದಾಟಿದ ಮೇಲೆ ರೈಲಿನಲ್ಲಿದ್ದ ಶುರೈಮ್ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ.
ಈ ಕುರಿತು ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದು, ಆತ ಕ್ಷಮೆಯಾಚಿಸಿದ್ದಾನೆ ಎಂದು ತಿಳಿದು ಬಂದಿದೆ. ಕೂಡಲೇ ಯುವತಿ ರೈಲ್ವೆ ಆಪ್ ಮೂಲಕ ರೈಲ್ವೆ ಪೊಲೀಸರ ಗಮನಕ್ಕೆ ತಂದಿದ್ದರು. ಯುವತಿ ರೈಲಿನಲ್ಲಿ ಆರೋಪಿಯು ಫೋಟೋ ಕೂಡ ತನ್ನ ಮೊಬೈಲ್ ನಲ್ಲಿ ತೆಗೆದುಕೊಂಡಿದ್ದಾಳೆ. ಈ ಬಗ್ಗೆ ಕಾರ್ಯಪ್ರವರ್ತರಾದ ಮಣಿಪಾಲದ ಪೊಲೀಸರು ಎಲ್ಲಾ ಮಾಹಿತಿಯನ್ನು ದಾಖಲಿಸಿಕೊಂಡು ಆರೋಪಿಯನ್ನು 20 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.