ಸಾಮಾಜಿಕ

ಉಡುಪಿ:ಲಾಡ್ಜ್ ನಲ್ಲಿ ಬಲವಂತವಾಗಿ ಮಹಿಳೆಯನ್ನು ಇರಿಸಿಕೊಂಡು ವೇಶ್ಯಾವಾಟಿಕೆ

Views: 338

ಉಡುಪಿ: ಮಹಿಳೆಯನ್ನು ಬಲವಂತವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಉಡುಪಿ 80 ಬಡಗಬೆಟ್ಟು ಗ್ರಾಮದ ಖಾಸಗಿ ಲಾಡ್ಜ್ ವೊಂದಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಆರೋಪಿಗಳು ತಪ್ಪಿಸಿಕೊಂಡಿದ್ದು, ಲಾಡ್ಜ್  ರೂಮ್‌ನಲ್ಲಿದ್ದ ಪಶ್ಚಿಮ ಬಂಗಾಲ ಮೂಲದ  ಬೆಂಗಳೂರಿನಲ್ಲಿ ವಾಸವಿರುವ ಸಂತ್ರಸ್ತ ಯುವತಿಯನ್ನು ರಕ್ಷಿಸಲಾಗಿದೆ.

ಈಕೆಯಿಂದ ಕೃತ್ಯದ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದು, ಸಂತ್ರಸ್ತೆ ನೀಡಿರುವ ಮಾಹಿತಿಯಂತೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!