ಕರಾವಳಿ

ಉಡುಪಿ:ಶಿರೂರು ಗುಡ್ಡಕುಸಿತ ರಕ್ಷಣಾ ಕಾರ್ಯಾಚರಣೆ 5ನೇ ದಿನಕ್ಕೆ, 6 ಜನರ ಶವ ಪತ್ತೆ ನಾಲ್ವರಿಗಾಗಿ ತೀವ್ರ ಶೋಧ

Views: 156

ಉಡುಪಿ: ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡಕುಸಿತ ಪ್ರಕರಣ ರಕ್ಷಣಾ ಕಾರ್ಯಾಚರಣೆ 5ನೇ ದಿನಕ್ಕೆ ಕಾಲಿಟ್ಟಿದ್ದು, ಈ ವರೆಗೂ 6 ಜನರ ಶವ ಪತ್ತೆಯಾಗಿ, ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.

ತಾಲ್ಲೂಕಿನ ಶಿರೂರು ಗ್ರಾಮದಲ್ಲಿ ಮಂಗಳವಾರ ಗುಡ್ಡಕುಸಿದು ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಮುಚ್ಚಿಹೋಗಿತ್ತು. ಇದೀಗ ಸತತ 4 ದಿನಗಳ ಕಾರ್ಯಾಚರಣೆ ಬಳಿಕ ಈ ವರೆಗೂ ಶೇ.75 ರಷ್ಟು ಅವಶೇಷಗಳನ್ನು ಶುಕ್ರವಾರ ಸಂಜೆ ವೇಳೆಗೆ ತೆರವುಗೊಳಿಸಲಾಗಿದೆ.

ಭಾರತೀಯ ನೌಕಾಪಡೆಯ ಸೀ-ಬರ್ಡ್‌ನ ಆಳವಾದ ಸಮುದ್ರ ಡೈವರ್‌ಗಳು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್) ಗಂಗವಳಿ ನದಿಯ ಕೆಸರು ನೀರನ್ನು ಸ್ಕ್ಯಾನ್ ಮಾಡಿದ ನಂತರ ಶುಕ್ರವಾರ ರಕ್ಷಣಾ ಕಾರ್ಯಾಚರಣೆ ವೇಗ ಪಡೆದಿದೆ.

ಆದರೆ ಬೆಳಗ್ಗೆಯಿಂದಲೇ ಭಾರೀ ಮಳೆ ಸುರಿದಿದೆ. ನದಿಯು ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದ್ದರಿಂದ ರಕ್ಷಣಾ ಕಾರ್ಯಾಚರಣೆಯನ್ನು ಮತ್ತಷ್ಟು ಕ್ಲಿಷ್ಟಗೊಳಿಸಿದೆ.

 

Related Articles

Back to top button