ಕರಾವಳಿ

ಉಡುಪಿ ಅಂಬಾಗಿಲಿನಲ್ಲಿ ಟಿಪ್ಪರ್ ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು

Views: 177

ಉಡುಪಿ: ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯಲ್ಲಿ ಶುಕ್ರವಾರ ನಡೆದಿದೆ.

ಅಂಬಾಗಿಲು ಉಡುಪಿ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಬಿದ್ದಿದೆ.

ಮೃತ ಬೈಕ್ ಸವಾರನನ್ನು ಬ್ರಹ್ಮಾವರದ ಮಟಪಾಡಿ ಮೂಲದ ಪ್ರಭಾಕರ ಆಚಾರ್ ಎಂದು ಗುರುತಿಸಲಾಗಿದೆ. ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯ ರಸ್ತೆಗೆ ಬರುತಿದ್ದರು ಎಂದು ತಿಳಿಯಲಾಗಿದೆ.

Related Articles

Back to top button
error: Content is protected !!