ಇತರೆ

ಉಡುಪಿ: ಅಸಹಾಯಕ ಸ್ಥಿತಿಯಲ್ಲಿದ್ದ ಅಪ್ರಾಪ್ತ ಬಾಲಕಿಯ ರಕ್ಷಣೆ 

Views: 130

ಕನ್ನಡ ಕರಾವಳಿ ಸುದ್ದಿ: ಅಸಹಾಯಕ ಸ್ಥಿತಿಯಲ್ಲಿದ್ದ ಅಪ್ರಾಪ್ತ ಪ್ರಾಯದ ಬಾಲಕಿಯನ್ನು ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ರಕ್ಷಿಸಲಾಗಿದೆ.

ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಾರ್ಥಿಯಾಗಿ ತೆರಳಿದ್ದ, ಆದಿ ಉಡುಪಿಯ ಪ್ರೇಮ ರಾಮಚಂದ್ರ ಎನ್ನುವರಿಗೆ ಬಾಲಕಿ ಕಂಡುಬಂದಿದ್ದಾಳೆ. ಅವರು ಬಾಲಕಿಯ ಚಲನ ವಲನದಲ್ಲಿ ಸಂಶಯಗೊಂಡು ವಿಚಾರಿಸಿದಾಗ, ಬಾಲಕಿ ಮನನೊಂದು ಮನೆ ಬಿಟ್ಟು ಬಂದಿರುವುದಾಗಿ‌ ತಿಳಿದುಬಂದಿದೆ. ತಕ್ಷಣ ಅವರು ಸಮಾಜಸೇವಕ ನಿತ್ಯಾನಂದ ಒಳಕಾಡುವರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ನೆರವಿಗೆ ಬಂದ ಒಳಕಾಡುವರು ನಗರ ಪೋಲಿಸ್ ಠಾಣೆಗೆ ಮಾಹಿತಿ ನೀಡಿ, ಬಾಲಕಿಗೆ ದೊಡ್ಡಣಗುಡ್ಡೆಯ ಬಾಲಕೀಯರ ಬಾಲ ಮಂದಿರದಲ್ಲಿ ಪುರ್ನವಸತಿ ಕಲ್ಪಿಸಿದರು. ಕಾರ್ಯಚರಣೆಗೆ ಹರೀಶ್ ಪೂಜಾರಿ ಉದ್ಯಾವರ ಸಹಕರಿಸಿದರು.

ಬಾಲಕಿ ನಾಪತ್ತೆಯಾದ ಬಗ್ಗೆ ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಳೇಬೀಡು ಪೋಲಿಸರು ಬಾಲಕಿ ಉಡುಪಿಯಲ್ಲಿ‌ ಪತ್ತೆಯಾಗಿರುವ ಮಾಹಿತಿ ತಿಳಿದು ಬಾಲಕಿಯ ತಾಯಿ‌ಯೊಂದಿಗೆ ಬಂದಿದ್ದರು.‌ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಹಳೇಬೀಡಿನ ಪೋಲಿಸರಿಗೆ ಒಪ್ಪಿಸಿದರು. ತಾಯಿಯೊಂದಿಗೆ ತೆರಳಲು ಒಪ್ಪದ ಕಾರಣದಿಂದ ಬಾಲಕಿಗೆ ಚಿಕ್ಕಮಗಳೂರು ಬಾಲಕೀಯರ ಬಾಲ ಮಂದಿರದಲ್ಲಿ ಪುರ್ನವಸತಿ ಕಲ್ಪಿಸುವ ಪ್ರಕ್ರಿಯೆ ಮುಂದುವರಿದಿದೆ.

Related Articles

Back to top button
error: Content is protected !!