ಇತರೆ

ಉಡುಪಿ: ಆಸ್ಪತ್ರೆಯಿಂದ ಪರಾರಿಯಾದ ಹಲ್ಲೆ ಪ್ರಕರಣದ ಆರೋಪಿ ಬಂಧನ 

Views: 77

ಕನ್ನಡ ಕರಾವಳಿ ಸುದ್ದಿ: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಜಿಲ್ಲಾಸ್ಪತ್ರೆಯಿಂದ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ತೆಂಕನಿಡಿಯೂರು ನಿವಾಸಿ ಕಿರಣ್ ಪಿಂಟೋ (49) ಎಂದು ಗುರುತಿಸಲಾಗಿದೆ.

ಜನವರಿ 18ರಂದು ಬ್ರಹ್ಮಾವರದ ಬಾರ್ ಎದುರು ನಡೆದ ಹಲ್ಲೆ ಪ್ರಕರಣದಲ್ಲಿ ಕಿರಣ್ ಪಿಂಟೋ ಪ್ರಮುಖ ಆರೋಪಿಯಾಗಿದ್ದು, ಘಟನೆ ವೇಳೆ ಗಾಯಗೊಂಡಿದ್ದ ಈತನನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿತ್ತು.

ಆದರೆ ಜ.21ರಂದು ಬೆಳಗಿನ ಜಾವ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಆರೋಪಿ ಪರಾರಿಯಾಗಿದ್ದನು.

ಈ ಹಿನ್ನೆಲೆ ಬ್ರಹ್ಮಾವರ ಪೊಲೀಸರು ಆರೋಪಿ ಬಂಧನಕ್ಕಾಗಿ ತೀವ್ರ ಶೋಧ ಕಾರ್ಯಾಚರಣೆ ಕೈಗೊಂಡಿದ್ದರು.

ನಿರಂತರ ತನಿಖೆ ಮತ್ತು ಶೋಧ ಕಾರ್ಯದ ಫಲವಾಗಿ ಜ.24ರಂದು ಕಿರಣ್ ಪಿಂಟೋವನ್ನು ಬಂಧಿಸಿದ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪ್ರಕರಣ ಸಂಬಂಧ ಮುಂದಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

Related Articles

Back to top button
error: Content is protected !!