ರಾಜಕೀಯ
ಉಡುಪಿ: ಇಬ್ಬರು ಬಿಜೆಪಿ ನಾಯಕರ ಉಚ್ಛಾಟನೆ

Views: 185
ಕನ್ನಡ ಕರಾವಳಿ ಸುದ್ದಿ: ಜಿಲ್ಲಾ ಮಟ್ಟದಲ್ಲಿ ಇಬ್ಬರು ಬಿಜೆಪಿ ಮುಖಂಡರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮಾಜಿ ಜಿಪಂ ಸದಸ್ಯ ಉದಯ ಕೋಟ್ಯಾನ್ ಹಾಗೂ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಅವರನ್ನು ಪಕ್ಷದಿಂದ ಆರು ವರ್ಷ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಪಕ್ಷದ ತೀರ್ಮಾನಕ್ಕೆ ಇವರಿಬ್ಬರು ವಿರುದ್ಧವಾಗಿ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ (ಕೆ.ಎಂ.ಎಫ್.)ದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, ಇದು ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ಹಾಗಾಗಿ ಇವರುಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.