ಉಡುಪಿ ಕಮರ್ಷಿಯಲ್ ಕಟ್ಟಡ ಬೆಂಕಿಗಾಹುತಿ: ಕೋಟ್ಯಂತರ ರೂ.ನಷ್ಟ
Views: 34
ಕನ್ನಡ ಕರಾವಳಿ ಸುದ್ದಿ: ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದಲ್ಲಿರುವ ಖಾದರ್ ಕಮರ್ಷಿಯಲ್ ಕಟ್ಟಡವೊಂದರ ಅಂಗಡಿವೊಂದರಲ್ಲಿ ಭಾನುವಾರ ಸಂಜೆ ವೇಳೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿ ಇಡೀ ಕಟ್ಟಡವೇ ಬೆಂಕಿಗಾಹುತಿಯಾಗಿ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.

ಖಾದರ್ ಕಮರ್ಷಿಯಲ್ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಟ್ಟಡಕ್ಕೆ ಅವರಿಸಿದ್ದ ಪರಿಣಾಮ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿವೆ.
ಭಾನುವಾರ ಸಂಜೆ 5.20 ರ ವೇಳೆಗೆ ಕಟ್ಟಡದ ನೆಲ ಮಹಡಿಯಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಕಟ್ಟಡದಲ್ಲಿದ್ದ ಮೊಬೈಲ್ ಶಾಪ್ ಹಾಗೂ ಹಾರ್ಡ್‌ವೇರ್ ಅಂಗಡಿಗೆ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಬೆಂಕಿಯ ಕೆನ್ನಾಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿ ಅಂಗಡಿಗಳಲ್ಲಿದ್ದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ದಟ್ಟ ಹೊಗೆ ಎದ್ದಿದ್ದು, ಬೆಂಕಿಯನ್ನು ಹಾರಿಸುವುದಕ್ಕೆ ಅಗ್ನಿಶಾಮಕ ದಳ ಹರಸಾಹಸ ಪಟ್ಟಿದೆ. ಅವಘಡದಿಂದ ಕೋಟ್ಯಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿವೆ.
ಭಾನುವಾರ ಸಂಜೆ 5.20 ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿಯಲ್ಲಿ ಮೊಬೈಲ್, ಮೊಬೈಲ್ ರಿಪೇರಿಗಳಿಗೆ ಬಳಸುವ ಸೊತ್ತು, ಪ್ಲಾಸ್ಟಿಕ್ ಸಹಿತ ಬೇರೆ ಬೇರೆ ವಸ್ತುಗಳ ಅಂಗಡಿ ಈ ಕಟ್ಟಡದಲ್ಲಿತ್ತು. ಬೆಂಕಿ ಒಮ್ಮೆಗೆ ಇಡೀ ಕಟ್ಟಡಕ್ಕೆ ವ್ಯಾಪ್ತಿಸಿದೆ. ಬೆಂಕಿ ಹೊತ್ತಿಕೊಂಡಿರುವ ಸುದ್ದಿಯನ್ನು ತಿಳಿಯುತ್ತಿದ್ದಂತೆ ಕಟ್ಟಡದ ಸುತ್ತಲೂ ಸಾರ್ವಜನಿಕರು ಬಂದು ಸೇರಿದ್ದರು. ಪಕ್ಕದ ಕಟ್ಟಡವನ್ನು ಏರಿ ಬೆಂಕಿ ನಂದಿಸುವುದಕ್ಕೆ ನೀರು ಎರಚಲು ಪ್ರಯತ್ನ ಪಟ್ಟರೂ ಫಲ ಕೊಡಲಿಲ್ಲ. ಆರಂಭದಲ್ಲಿ ಒಂದು ಟ್ಯಾಂಕರ್ ಬಂದಿದ್ದು, ಬೆಂಕಿ ನಂದಿಸುವುದಕ್ಕೆ ಸಾಧ್ಯವಾಗದೇ ಇರುವ ಹಿನ್ನೆಲೆಯಲ್ಲಿ ಇನ್ನೊಂದು ಟ್ಯಾಂಕರ್‌ಯನ್ನು ತರಿಸಲಾಯಿತು. ಆದರೂ 8 ಗಂಟೆಯ ತನಕವೂ ಬೆಂಕಿ ನಿಯಂತ್ರಣಕ್ಕೆ ಬಂದಿರಲಿಲ್ಲ. ಅಕ್ಕಪಕ್ಕದ ಅಂಗಡಿ ಮಾಲೀಕರು ತಮ್ಮ ಅಂಗಡಿಯಲ್ಲಿದ್ದ ಸೊತ್ತುಗಳನ್ನು ಇತರೆಡೆಗೆ ಸಾಗಿಸಿ ಮುಂಜಾಗೃತಾ ಕ್ರಮ ವಹಿಸಿದರು.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.






