ಇತರೆ

ಉಡುಪಿ: ಕಾಲು ದಾರಿಯಲ್ಲಿ ಅನಾಥವಾಗಿ ಬಿದ್ದಿರುವ ನವಜಾತ ಹೆಣ್ಣು ಶಿಶು ಪತ್ತೆ! 

Views: 59

ಕನ್ನಡ ಕರಾವಳಿ ಸುದ್ದಿ: ನವಜಾತ ಹೆಣ್ಣು ಶಿಶುವೊಂದನ್ನು ರಸ್ತೆ ಬದಿಯ ಕಾಲುದಾರಿಯಲ್ಲಿ ಎಸೆದುಹೋದ ಅಮಾನವೀಯ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಸೋಮವಾರ ಸಂಭವಿಸಿದೆ.

ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ನವಜಾತ ಶಿಶು ಅನಾಥವಾಗಿ ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ತಕ್ಷಣವೇ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಪರಿಶೀಲನೆ ನಡೆಸಿದಾಗ ಮಗುವಿನ ಹೃದಯ ಬಡಿತ ಇರುವುದು ದೃಢಪಟ್ಟಿದ್ದು, ಹೆಚ್ಚಿನ ಚಿಕಿತ್ಸೆ ಹಾಗೂ ಆರೈಕೆಗಾಗಿ ಉಡುಪಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮಲ್ಪೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಶಿಶುವನ್ನು ಯಾರು ಹಾಗೂ ಯಾವ ಸಂದರ್ಭದಲ್ಲಿಗೆ ಇಲ್ಲಿ ಬಿಟ್ಟು ಹೋದರು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

ಘಟನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಶಿಶುವನ್ನು ಬಿಟ್ಟುಹೋದ ವ್ಯಕ್ತಿಗಳು ಅಥವಾ ಅವರ ಚಲನವಲನದ ಕುರಿತು ಸುಳಿವು ಸಂಗ್ರಹಿಸಲು ಮುಂದಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

Related Articles

Back to top button
error: Content is protected !!