ಯುವಜನ
ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ, ದೂರು ದಾಖಲು
Views: 81
ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಯುವತಿಯೊಬ್ಬಳು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.
ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಮೂಲದ ದೀಪಾ ಸುರೇಶ್ ಲಮಾಣಿ ಎಂದು ಗುರುತಿಸಲಾಗಿದೆ.
ನಾಪತ್ತೆಯಾದ ಯುವತಿ ಉಡುಪಿ ನಗರದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಟಪಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ದೀಪಾ ಅವರು ಫೆಬ್ರವರಿ 20 ರಂದು ಕಾಲೇಜಿಗೆ ರಜೆ ಹಾಕಿ ಮನೆಯಿಂದ ಹೊರಹೋಗಿದ್ದರು. ಆದರೆ, ಅಂದಿನಿಂದ ಅವರು ಮನೆಗೆ ಮರಳಿಲ್ಲ. ಈ ಸಂಬಂಧ ನಾಪತ್ತೆ ದೂರು ದಾಖಲಾಗಿದ್ದು, ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
ದೀಪಾ 5 ಅಡಿ 6 ಇಂಚು ಎತ್ತರ, ಗೋಧಿ ಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಆಕೆ ಕನ್ನಡ, ಲಂಬಾಣಿ ಮತ್ತು ಹಿಂದಿ ಭಾಷೆ ಮಾತನಾಡಬಲ್ಲರು.
ಈ ಯುವತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಿದ್ದಲ್ಲಿ ಸಾರ್ವಜನಿಕರು ಕೂಡಲೇ ಕಾಪು ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.






