ಕರಾವಳಿ

ಉಡುಪಿ: ಗೆಳತಿಯ ಮತಾಂತರಕ್ಕೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿ ಬಂಧನ!

Views: 206

ಉಡುಪಿ: ಇಸ್ಲಾಂಗೆ ಮತಾಂತರವಾಗುವಂತೆ ಗೆಳತಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಮಣಿಪಾಲದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್(27) ಬಂಧಿತ ಆರೋಪಿ, ಆತನ ವಿರುದ್ಧ ಸಹಪಾಠಿ ನೀಡಿದ ದೂರಿನ ಮೇರೆಗೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿದ್ಯಾರ್ಥಿನಿ ನೀಡಿದ ದೂರಿನ ಪ್ರಕಾರ, ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ವೇಳೆ ಡ್ಯಾನಿಶ್ ಖಾನ್ ರಾಮಮಂದಿರ ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಸಿದ್ದಾನೆ. ಅಷ್ಟೇ ಅಲ್ಲದೆ ಮಾರ್ಚ್ 11ರಂದು ಯುವತಿ ಇದ್ದ ರೂಮಿಗೆ ನುಗ್ಗಿ ಮದುವೆ ಆಗುವಂತೆ ಒತ್ತಾಯಿಸಿದ್ದಲ್ಲದೆ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಿದ್ದನು ಎಂದು ಆರೋಪಿಸಲಾಗಿದೆ.ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ ಕೋಪದಲ್ಲಿ ಡ್ಯಾನಿಷ್ ಖಾನ್ ಗೆಳತಿಯ ಕಪಾಳಕ್ಕೆ ಹೊಡೆದಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ಅಲ್ಲದೆ ತನ್ನ ದೇಹವನ್ನು ಮುಟ್ಟುವ ಮೂಲಕ ಅನುಚಿತವಾಗಿ ವರ್ತಿಸಿದ್ದಾನೆ. ಪದೇ ಪದೇ ವಿರೋಧಿಸಿದರೂ ಆರೋಪಿ ತನ್ನ ಖಾಸಗಿ ಅಂಗಗಳನ್ನು ಮುಟ್ಟಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಆ ಘಟನೆಯ ನಂತರ ಡ್ಯಾನಿಶ್ ಖಾನ್ ತನಗೆ ಫೋನ್ ಮೂಲಕ ಕಿರುಕುಳ ನೀಡಲಾರಂಭಿಸಿದ್ದ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೊನೆಗೆ ಒತ್ತಡ ತಡೆದುಕೊಳ್ಳಲಾಗದೆ ಆಗಸ್ಟ್ 31ರಂದು ಪೊಲೀಸರಿಗೆ ದೂರು ನೀಡಿದ್ದಾಳೆ.

ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಉಡುಪಿ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ಬಂಧಿಸಿದ್ದಾರೆ. ಡ್ಯಾನಿಷ್ ಖಾನ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

Back to top button
error: Content is protected !!