ರಾಜಕೀಯ
ಉಡುಪಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬದಲಿಸುವಂತೆ ಕಾರ್ಯಕರ್ತರ ಒತ್ತಾಯ

Views: 127
ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೀನಾಯ ಸೋಲಾಗಿದೆ. ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಪ್ರತಿಸ್ಪರ್ಧಿ ಕೋಟ ಶ್ರೀನಿವಾಸ ಪೂಜಾರಿ ವಿರುದ್ಧ 2.5 ಲಕ್ಷಕ್ಕೂ ಹೆಚ್ಚು ಮತಗಳಿಂದ ಸೋಲು ಕಂಡಿದ್ದಾರೆ. ಅವರ ಸೋಲಿನ ಬಳಿಕ ಉಡುಪಿಯ ಕಾಂಗ್ರೆಸ್ ಘಟಕಕ್ಕೆ ನಿರಾಸೆಯಾಗಿದೆ. ಪ್ರಮುಖವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ರೋಶ ವ್ಯಕ್ತಗೊಂಡಿದೆ.
ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ʼಗೋ ಬ್ಯಾಕ್ʼ ಅಭಿಯಾನ ಸೃಷ್ಟಿಯಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್ ಸೋಲಿಗೆ ಜಿಲ್ಲಾ ಉಸ್ತುವಾರಿಗಳೇ ಕಾರಣ ಎಂಬುದಾಗಿ ಕಾಂಗ್ರೆಸ್ ಆರೋಪಿಸಿದೆ. ಜಿಲ್ಲೆಯಲ್ಲಿ ಸಮಸ್ಯೆ ಉಂಟಾದಾಗ ಬರುವುದಿಲ್ಲ. ಹಾಗಿದ್ದ ಮೇಲೆ ಉಸ್ತುವಾರಿಯಾಗಿರುವ ಅಗತ್ಯವೇನು ಎಂಬುದಾಗಿ ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದ್ದಾರೆ. ಉಡುಪಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಸಚಿವರನ್ನು ಬದಲಿಸುವಂತೆ ಕಾರ್ಯಕರ್ತರು ಒತ್ತಾಯ ಮಾಡಿದ್ದಾರೆ.






