ರಾಜಕೀಯ

ಉಡುಪಿ: ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Views: 0

ಉಡುಪಿ :ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವ ನಿರ್ಧಾರದಿಂದ ಹಿಂದೆ ಸರಿದು ಬಡವರ ಅನ್ನ ಕಿತ್ತುಕೊಳ್ಳಲು ಹೊರಟಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು.

ಅವರು ಉಡುಪಿ ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಬ್ರಹ್ಮಗಿರಿ ಸರ್ಕಲ್ ನಲ್ಲಿ ಕೇಂದ್ರ ಸರಕಾರ ರಾಜ್ಯಕ್ಕೆ ಅಕ್ಕಿ ನೀಡದೆ ಮಲತಾಯಿ ಧೋರಣೆಯ ಕುರಿತು ನಡೆದ ಪ್ರತಿಭಟನೆಯಲ್ಲಿ ಆರೋಪಿಸಿ, ಮಾತನಾಡಿದರು.

ಬಿಜೆಪಿಯವರು ಎಲ್ಲಾ ಐದು ಗ್ಯಾರಂಟಿಗಳನ್ನು ಕೂಡಲೇ ಅನುಷ್ಠಾನಗೊಳಿಸುವಂತೆ ಒತ್ತಾಯ ಮಾಡುತ್ತಾರೆ. ಇನ್ನೊಂದು ಕಡೆ ಯೋಜನೆಯ ಅನುಷ್ಠಾನ ಮಾಡದಂತೆ ಅಡ್ಡ ಕಾಲು ಹಾಕುತ್ತಿದ್ದಾರೆ ಎಂದು ಈ ಸಂದರ್ಭದಲ್ಲಿ ಅವರು ದೂರಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಫೂರ್, ಉದಯ್ ಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ ಮುಂತಾದ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದರು.

Related Articles

Back to top button
error: Content is protected !!