ಶಿಕ್ಷಣ

ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಮದರ್ ತೆರೇಸಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆ ವಿಭಾಗದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Views: 3

ಕನ್ನಡ ಕರಾವಳಿ ಸುದ್ದಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಉಡುಪಿ ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇವರ ಆಶ್ರಯದಲ್ಲಿ ಇಂದು ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳ ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯಲ್ಲಿ, ಮದರ್ ತೆರೇಸಾ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಇಲ್ಲಿನ ದ್ವಿತೀಯ ಪಿಯುಸಿಯ ಬಹುಮುಖ ಪ್ರತಿಭೆ, ಪ್ರತೀಕ್ಷಾ ಇವರು ಆಶುಭಾಷಣ ಹಾಗೂ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ, ಅದ್ವಿತೀಯ ಸಾಧನೆ ಮಾಡಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಈ ಶ್ಲಾಘನೀಯ ಸಾಧನೆ ಮಾಡಿರುವ ಈ ಉದಯೋನ್ಮುಖ ಪ್ರತಿಭಾನ್ವಿತೆಗೆ ಸಂಸ್ಥೆಯ ಸಂಸ್ಥಾಪಕರಾದ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರು , ಉಪ ಪ್ರಾಂಶುಪಾಲರು,ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ ಹಾಗೂ ಮುಂದಿನ ಹಂತಕ್ಕೆ ಶುಭ ಹಾರೈಸಿರುತ್ತಾರೆ.

Related Articles

Back to top button