ಕನ್ನಡ ಕರಾವಳಿ ಸುದ್ದಿ: ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 25ರಂದು ಅಂಗನವಾಡಿ, ಸರಕಾರಿ ಅನುದಾನಿತ – ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪಿಯು ಕಾಲೇಜು ಐಟಿಐ, ಡಿಪ್ಲೋಮಾಗಳ ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ್.ಟಿ.ಕೆ ಅವರು ರಜೆ ಘೋಷಿಸಿ ಆದೇಶಿಸಿದ್ದಾರೆ.
ಉಳಿದಂತೆ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ. ಆದರೆ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ ಮತ್ತು ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.