ಶಿಕ್ಷಣ

ಉಡುಪಿ ಜಿಲ್ಲೆಯಾದ್ಯಂತ ಹಲವು ಶಾಲಾ ಕಾಲೇಜುಗಳಿಗೆ ರಜೆ, ಬೈಂದೂರಿನ 19 ಶಾಲೆಗಳಿಗೆ ರಜೆ ಘೋಷಣೆ

Views: 237

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ. ಅದರಂತೆ ಜಿಲ್ಲೆಯ ಕೆಲವು ಶಾಲೆಗಳು ಈಗಾಗಲೇ ರಜೆ ಘೋಷಣೆ ಮಾಡಿದೆ ಎಂದು ತಿಳಿದು ಬಂದಿದೆ

ಉಡುಪಿ ಜಿಲ್ಲೆಯ ಎಲ್ಲಾ ಏಳೂ ತಾಲೂಕಿನಲ್ಲಿ ನಿರಂತರ ಮಳೆ ಆಗುತ್ತಿಲ್ಲ. ರಾತ್ರಿ 10 ಗಂಟೆಯ ನಂತರ ಮಳೆ ಕೆಲವಡೆ ಕಡಿಮೆಯಾಗಿದ್ದು ಪರಿಸ್ಥಿತಿಯನ್ನು ನೋಡಿಕೊಂಡು ರಜೆ ಘೋಷಣೆ ಮಾಡುವ ಅಧಿಕಾರವನ್ನು ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅದರಂತೆ ಬೈಂದೂರು ತಾಲೂಕಿನ 19 ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ.

Related Articles

Back to top button