ಉಡುಪಿ ಜಿಲ್ಲೆ 2, ಉತ್ತರ ಕನ್ನಡದ 4 ತಾಲೂಕುಗಳಲ್ಲಿ ನಾಳೆ ಶಾಲಾ-ಕಾಲೇಜಿಗಳಿಗೆ ರಜೆ ಘೋಷಣೆ

Views: 268
ಉಡುಪಿಯಲ್ಲಿ ಭಾರೀ ಮಳೆಯಾಗುತ್ತಿರುವುದುರಿಂದ ಮುಂಜಾಗ್ರತಾವಾಗಿ ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
,ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ನಾಳೆ(ಜುಲೈ 06) ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಾರವಾರ, ಕುಮಟಾ, ಭಟ್ಕಳ, ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.
,ಶಿರಸಿ,ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನಲ್ಲಿ ಶಾಲಾ ಕಾಲೇಜ್ ಗೆ ರಜೆ ಇಲ್ಲ.






