ಕರಾವಳಿ
ಉಡುಪಿ ತಾಯಿ ಮಕ್ಕಳ ಕಗ್ಗೊಲೆ ಪ್ರಕರಣ: ಆರೋಪಿಗೆ ಜಾಮೀನು ಅರ್ಜಿ ವಜಾ

Views: 25
ಉಡುಪಿ: ಉಡುಪಿ ನೇಜಾರು ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿ ತಿರಸ್ಕೃತವಾಗಿದೆ.
ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ನೀಡಿದೆ.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ವಕೀಲ ಕೆ.ಎಸ್.ಎನ್.ರಾಜೇಶ್ ಮೂಲಕ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿದ್ದರು.
ಈ ಕುರಿತು ವಾದ ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶ ದಿನೇಶ್ ಹೆಗ್ಡೆ ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.