ಕರಾವಳಿ

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ! ಯಲ್ಲೋ ಅಲರ್ಟ್‌ ಘೋಷಣೆ

Views: 319

ಕನ್ನಡ ಕರಾವಳಿ ಸುದ್ದಿ: ರಾಜ್ಯಾದ್ಯಂತ ಒಣ ಹವೆಯ ವಾತಾವರಣ ಮುಂದುವರಿದಿದ್ದು, ಮುಂದಿನ 6 ದಿನಗಳ ಕಾಲ ಇದೇ ರೀತಿಯ ಸ್ಥಿತಿ ಇರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 18°C ಇರಲಿದೆ. ಇನ್ನು ಮುಂದಿನ 3 ದಿನಗಳವರೆಗೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಸೋಮವಾರ ಚಾಮರಾಜನಗರದಲ್ಲಿ ಅತೀ ಕಡಿಮೆ ಉಷ್ಣಾಂಶ 13.5 ಡಿ.ಸೆ. ದಾಖಲಾಗಿದ್ದು, ಹೊನ್ನಾವರದಲ್ಲಿ ಅತೀ ಹೆಚ್ಚು ಉಷ್ಣಾಂಶ 38.5 ಡಿ.ಸೆ ದಾಖಲಾಗಿದೆ. ಫೆ. 26ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮಾರ್ಚ್‌ 3ರ ವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ.

 

 

Related Articles

Back to top button
error: Content is protected !!