ಇತರೆ

ಉಡುಪಿ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಇಂದ್ರಾಣಿ ನದಿಯಲ್ಲಿ ಪತ್ತೆ 

Views: 22

ಕನ್ನಡ ಕರಾವಳಿ ಸುದ್ದಿ,: ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಇಂದ್ರಾಣಿ ನದಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ನಡೆದಿದೆ.

ಮೃತರನ್ನು ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾಸಿ ಸುರೇಶ್ ಪೂಜಾರಿ (54) ಎಂದು ಗುರುತಿಸಲಾಗಿದೆ. ಇವರು ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೊಡವೂರು ಶಂಕರನಾರಾಯಣ ದೇವಸ್ಥಾನದ ಹಿಂಭಾಗದಿಂದ ಹರಿಯುವ ಡ್ರೈನೇಜ್ ನೀರಿನ ಇಂದ್ರಾಣಿ ನದಿಯಲ್ಲಿ ಶವ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಮಲ್ಪೆ ಪೊಲೀಸ್ ಠಾಣೆಯ ಎ.ಎಸ್.ಐ ಹರೀಶ್ ಕೆ. ಮಹಜರು ಪ್ರಕ್ರಿಯೆ ನಡೆಸಿದರು.

Related Articles

Back to top button
error: Content is protected !!