ಉಡುಪಿ ನಾಲ್ವರ ಕೊಲೆ: ಹಲವಾರು ಶಂಕಿತರ ವಿಚಾರಣೆ, ಜಿಲ್ಲೆಯ ಎಲ್ಲಾ ಕಡೆ ಬಿಗಿ ಬಂದೋಬಸ್ತ್, :ಎಸ್ಪಿ ಡಾ. ಅರುಣ್
ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

Views: 2
ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ ಬಗ್ಗೆ ಉಡುಪಿ ಎಸ್ ಪಿ ಡಾ. ಅರುಣ್ ಮಾತನಾಡಿದ್ದಾರೆ. ಪ್ರಕರಣ ಸಂಬಂಧ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಕೊಲೆ ಆರೋಪಿ ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದೇವೆ. ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದಿದ್ದೇವೆ.ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಹೇಳಿದ್ದಾರೆ.
ನಂತರ ಮಾತು ಮುಂದುವರಿಸಿದ ಎಸ್ ಪಿ ಡಾ. ಅರುಣ್, ಸದ್ಯ ಚೌಗಲೆಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದೇವೆ. ಸಿಆರ್ಪಿಎಫ್ ಅಲ್ಲ, ಸಿವಿಲ್ ಪೊಲೀಸ್ನಲ್ಲಿ ಇದ್ದಾನೆ ಎಂಬ ಮಾಹಿತಿ ಇದೆ. ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಬಲವಾದ ಶಂಕೆಯ ಮೇರೆಗೆ ಪ್ರವೀಣ್ ಅರುಣ್ ಚೌಗಲೆಯನ್ನ ವಶಕ್ಕೆ ಪಡೆಯಲಾಗಿದೆ.ಸಂಬಂಧ 15 ರಿಂದ 20 ಜನರ ವಿಚಾರಣೆ ನಡೆಯುತ್ತಿದೆ. ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆದಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಜಿಲ್ಲೆಯಾದ್ಯಂತ ಮುಂಜಾಗ್ರತಾ ಕ್ರಮವಾಗಿ ಬಂದೋಬಸ್ತ್ ರಚಿಸಲಾಗಿದೆ ಎಂದಿದ್ದಾರೆ.
ಯಾವುದೇ ವದಂತಿಗಳಿಗೆ ಯಾರು ಕಿವಿಕೊಡಬಾರದು. ತನಿಖೆ ನಂತರ ಪ್ರಕರಣದ ಬಗ್ಗೆ ಪೂರ್ಣ ಚಿತ್ರಣವನ್ನು ಕೊಡುತ್ತೇವೆ. ವಶದಲ್ಲಿರುವ ಶಂಕಿತ ವ್ಯಕ್ತಿಗೆ 39- 40 ವರ್ಷ ವಯಸ್ಸು ಅಂದಾಜಿಸಲಾಗಿದೆ. ಮಲ್ಪೆಯ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ ಗೌಡ ಪ್ರಕರಣದ ತನಿಖಾಧಿಕಾರಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಆರೋಪಿ 14 ದಿನ ಪೊಲೀಸ್ ಕಸ್ಟಡಿಗೆ ನಾಲ್ವರು ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಆರೋಪಿ ಪ್ರವೀಣ್ ಅರುಣ್ ಚೌಗುಲೆಗೆ 14 ದಿನ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಇಂದಿನಿಂದ ನವೆಂಬರ್ 28ರವರೆಗೆ ಆರೋಪಿ ಪೊಲೀಸ್ ವಶದಲ್ಲಿ ಇರಲಿ ಎಂದು ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ಆದೇಶ ಹೊರಡಿಸಿದ್ದಾರೆ.