ಉಡುಪಿ ನಾಲ್ವರ ಬರ್ಬರ ಹತ್ಯೆ ಆರೋಪಿ ಬಾಯ್ಬಿಟ್ಟ ಆ ಮೂರು ಉದ್ದೇಶ ಯಾವುದು?!

Views: 2
ಉಡುಪಿ: ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಚೌಗಲೆ ಯನ್ನು ಉಡುಪಿ ಪೊಲೀಸರು ಬೆಳಗಾವಿಯಿಂದ ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದರು. ಉಡುಪಿ ಮತ್ತು ಬೆಳಗಾವಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡುಚಿಯಲ್ಲಿ ಬಂಧಿಸಲಾಗಿತ್ತು.
ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಣ್ಣು ನೇಜಾರಿನ ಹಂಪನಕಟ್ಟೆ ಸಮೀಪದ ತೃಪ್ತಿ ಲೇ ಔಟ್‌ನ ಮನೆಯ ತಾಯಿ ಮತ್ತು ಮೂವರು ಮಕ್ಕಳನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿತ್ತು.
ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿರುವ ನೂರ್ ಮೊಹಮ್ಮದ್ ಅವರ ಪತ್ನಿ ಹಸೀನಾ (48), ಪುತ್ರಿಯರಾದ ಅಫ್ನಾನ್ (23), ಅಯ್ನಾಝ್ (21), ಪುತ್ರ ಅಸೀಮ್ (14) ಹತ್ಯೆಗೀಡಾಗಿದ್ದರು.
ನೂರ್ ಮೊಹಮ್ಮದ್ ಅವರ ತಾಯಿ ಹಾಜಿರಾಬಿ (70) ಮೇಲೆಯೂ ದಾಳಿ ನಡೆಸಲಾಗಿತ್ತು
ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಬಿಗಿ ಭದ್ರತೆಯ ನಡುವೆ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತಿದೆ. ಎಸ್ಪಿ, ಡಿವೈಎಸ್ಪಿ ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
ಆರೋಪಿ ಕೊಲೆಗೆ ಮೂರು ಉದ್ದೇಶ ತಿಳಿಸಿದ್ದು ಅದನ್ನು ಅವರ ಕುಟುಂಬದ ಸದಸ್ಯರೊಂದಿಗೆ ಚರ್ಚಿಸಿ ದೃಢಪಡಿಸಬೇಕಾಗಿದೆ. ಈತ ಹಲವು ವರ್ಷಗಳಿಂದ ಮಂಗಳೂರಿನಲ್ಲಿ ನೆಲೆಸಿದ್ದಾನೆ. ಮಹಾರಾಷ್ಟ್ರ ಪೊಲೀಸ್ ಇಲಾಖೆಯಲ್ಲಿದ್ದಾನೆಯೇ ಎಂಬ ಬಗ್ಗೆ ಪರಿಶೀಲಿಸಲಾಗುವುದು. ಘಟನೆಗೆ ನಿಖರ ಕಾರಣ ಇತರರು ಯಾರಾದರೂ ಪಾಲ್ಗೊಂಡಿದ್ದಾರೋ ಎಂಬ ಬಗ್ಗೆ ಹಾಗೂ ಆತ ಈ ಹಿಂದೆ ಇಲ್ಲಿಗೆ ಬಂದಿದ್ದಾನೆಯೇ ಎಂಬ ಬಗ್ಗೆ ಹೆಚ್ಚಿನ ವಿಚಾರಣೆಯಿಂದ ತಿಳಿದು ಬರಲಿದೆ ಎಂದರು.
ಮೃತರ ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಮೂಲಕ ಮತ್ತಷ್ಟು ಮಾಹಿತಿ ಕಲೆ ಹಾಕಲಾಗುವುದು. ತಂದೆ ಮಗ ತನಿಖೆಗೆ ಸಹಕಾರ ನೀಡುತ್ತಿದ್ದಾರೆ. ತನಿಖೆಗೆ ಐದು ತಂಡಗಳಷ್ಟೇ ಅಲ್ಲದೆ ಹೆಚ್ಚುವರಿ ತಂಡಗಳನ್ನು ರಚಿಸಿ ಎಲ್ಲಾ ಆಯಾಮಗಳನ್ನು ಆಧರಿಸಿ ತನಿಖೆ ನಡೆಸಲಾಗುವುದು ಎಂದು ಎಸ್ ಪಿ ಹೇಳಿದ್ದಾರೆ.