ಇತರೆ
ಉಡುಪಿ ನಿಲ್ದಾಣದಲ್ಲಿ ಬಸ್ ಸಿಬ್ಬಂದಿ ನಡುವೆ ವಾಗ್ವಾದ: ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರಿಂದ ಆಗ್ರಹ
Views: 52
ಕನ್ನಡ ಕರಾವಳಿ ಸುದ್ದಿ: ಬಸ್ ನಿಲ್ದಾಣದಲ್ಲಿ ಪ್ರಯಾಣಿಕರನ್ನು ತುಂಬಿಸಿಕೊಂಡು ನಿಂತಿದ್ದ ಬಸ್‌ಗೆ ಅಡ್ಡವಾಗಿ ಇನ್ನೊಂದು ಬಸ್ ನಿಲ್ಲಿಸಿದ ಹಿನ್ನೆಲೆಯಲ್ಲಿ ಎರಡೂ ಬಸ್ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.
ಕೋಪಗೊಂಡ ಚಾಲಕ ತನ್ನ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ, ಎದುರಿನ ಬಸ್‌ಗೆ ಎರಡೆರಡು ಬಾರಿ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿರುವುದು ಸ್ಥಳದಲ್ಲಿದ್ದವರಲ್ಲಿ ಭಯ ಹುಟ್ಟಿಸಿದೆ. ಈ ಘಟನೆ ವೇಳೆ ಬಸ್ ನಿಲ್ದಾಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.
ಸಾರ್ವಜನಿಕರ ಪ್ರಾಣದ ಜೊತೆ ಚೆಲ್ಲಾಟವಾಡುವ ರೀತಿಯಲ್ಲಿ ವರ್ತಿಸಿದ ಬಸ್ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ನಿಯಮ ಉಲ್ಲಂಘನೆ ಮಾಡಿದ ಸಿಟಿ ಬಸ್‌ಗಳ ಪರವಾನಿಗೆಯನ್ನು ರದ್ದುಗೊಳಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.






