ಯುವಜನ
ಉಡುಪಿ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಶಾಲಾ ಬಾಲಕಿ, ಕಾರಣ ನಿಗೂಢ
Views: 276
ಕನ್ನಡ ಕರಾವಳಿ ಸುದ್ದಿ: ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳು ವಾಸವಾಗಿದ್ದ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ಉಡುಪಿಯ ಬೀಡಿನಗುಡ್ಡೆಯಲ್ಲಿ ನಡೆದಿದೆ. ಕಾರಣ ಇನ್ನೂ ತಿಳಿದು ಬಂದಿಲ್ಲ
ಬೋರ್ಡ್ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡುತ್ತಿದ್ದ 15 ವರ್ಷದ ಬರ್ಮವ್ವ ಮೃತ ಬಾಲಕಿ. ಖಾಸಗಿ ನಿವೇಶನದಲ್ಲಿದ್ದ ಜೋಪಡಿಯನ್ನು ಬಾಡಿಗೆ ಪಡೆದುಕೊಂಡು ಮೃತ ಬಾಲಕಿಯ ಹೆತ್ತವರು ವಾಸವಾಗಿದ್ದರು. ಮನೆ ಮಂದಿ ಬೆಳಿಗ್ಗೆ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಬಾಲಕಿಯಿಂದ ಈ ಕೃತ್ಯ ನಡೆದಿದೆ.
ನಗರ ಪೋಲಿಸ್ ಠಾಣೆಯ ಎಸ್ ಐ ಗಂಗಪ್ಪ, ಮುಖ್ಯ ಆರಕ್ಷಕಿಯರಾದ ಆಶಾ ಲತಾ, ಜಾಸ್ವ ಘಟನಾ ಸ್ಥಳದಲ್ಲಿದ್ದು ಕಾನೂನು ಪ್ರಕ್ರಿಯೆ ನಡೆಸಿದ್ದಾರೆ. ಸಮಾಜಸೇವಕ ನಿತ್ಯಾನಂದ ಒಳಕಾಡುವರು ಮೃತ ದೇಹವನ್ನು ನೇಣು ಕುಣಿಕೆಯಿಂದ ತೆರವುಗೊಳಿಸಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಇಲಾಖೆಗೆ ನೆರವಾದರು.






