ಇತರೆ

ಉಡುಪಿ: ಫ್ಲ್ಯಾಟ್, ಚಿನ್ನ ನೀಡುವುದಾಗಿ ನಂಬಿಸಿ ಉದ್ಯಮಿಗೆ 4.78 ಕೋಟಿ ವಂಚಿಸಿದ ದಂಪತಿ 

Views: 111

ಕನ್ನಡ ಕರಾವಳಿ ಸುದ್ದಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿ ಎಂಬವರಿಗೆ ಉಡುಪಿ ಮೂಲದ ದಂಪತಿ ಸುಹಾಸಿನಿ ಶೆಟ್ಟಿ ಹಾಗೂ ಪತಿ ಪುನೀತ್ ಶೆಟ್ಟಿ ಎಂಬವರು ಸುಮಾರು 4.78 ಕೋಟಿ ರೂಪಾಯಿ ವಂಚನೆ ಎಸಗಿದ್ದಾರೆ ಎಂದು ದಂಪತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂಪಾಯಿ ಹಣ ವರ್ಗಾಯಿಸಿಕೊಂಡಿದ್ದಾರೆ. ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ಯಾಪ್ ವ್ಯವಹಾರದಲ್ಲಿ ಲಾಭಕರ ಹೂಡಿಕೆ ಮಾಡಿಕೊಡುವುದಾಗಿ ನೀಡಿದ ಭರವಸೆಯನ್ನು ನಂಬಿದ ಹಿನ್ನೆಲೆಯಲ್ಲಿ ತಾನು ಮೋಸ ಹೋಗಿದ್ದಾಗಿ ದೂರು ನೀಡಲಾಗಿದೆ. ಆಕೆ ಜೊತೆ ಪತಿ ಕೂಡಾ ಕೈಜೋಡಿಸಿದ್ದಾರೆ.

2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು. ಈ ನಡುವೆ ಕಿಶೋ‌ರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡು ಮಂಗಳೂರಿನಲ್ಲೂ ಇದೇ ರೀತಿ ಮೋಸ ಮಾಡಿದ್ದಾರೆ.

ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ದೊರಕಿಸಿಕೊಡುವಂತೆ ಮಮತಾ ಶೆಟ್ಟಿ ಮಂಗಳೂರು ಪೊಲೀಸ್‌ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿರುವುದಾಗಿ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

Related Articles

Back to top button
error: Content is protected !!