ಇತರೆ

ಉಡುಪಿ: ಬಸ್ ಮಾಲಕ ಸೈಪುದ್ದೀನ್ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

Views: 361

ಕನ್ನಡ ಕರಾವಳಿ ಸುದ್ದಿ: ಮಲ್ಪೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ಎಕೆಎಂಎಸ್ ಬಸ್ ಮಾಲಕ ಸೈಪುದ್ದೀನ್ ಆತ್ರಾಡಿ ಎಂಬುವರನ್ನು ಭೀಕರವಾಗಿ ಹತ್ಯೆಗೈಯಲಾಗಿದೆ.

ಸೈಫುದ್ದೀನ್ ಮನೆಯಲ್ಲಿ ಒಬ್ಬರೇ ಇರುವ ಸಂದರ್ಭ, ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವುದಾಗಿ ವರದಿಯಾಗಿದೆ.

ಸ್ಥಳಕ್ಕೆ ಉಡುಪಿ ಜಿಲ್ಲಾ ಹೆಚ್ಚುವರಿ ಅಧೀಕ್ಷಕ ಸುಧಾಕರ್ ನಾಯಕ್, ಡಿವೈಎಸ್ಪಿ ಪ್ರಭು ಡಿಟಿ ಮೊದಲಾದವರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಆತನ ಬಸ್ಸಿನಲ್ಲಿ ಚಾಲಕರಾಗಿ ದುಡಿಯುತ್ತಿದ್ದ ಮೂವರು ಆರೋಪಿಗಳು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸೈಪುದ್ದೀನ್ ವಿರುದ್ಧ ಹುಟ್ಟು 18 ಪ್ರಕರಣಗಳು ದಾಖಲಾಗಿವೆ .ಎರಡು ಕೊಲೆ ಪ್ರಕರಣದಲ್ಲಿ ನೇರ ಆರೋಪಿಯಾಗಿದ್ದಾನೆ. ಕೊಲೆಗೆ ಕಾರಣ ಮತ್ತು ಆರೋಪಿಗಳ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಾಗಿದೆ ಎಂದಿದ್ದಾರೆ.

Related Articles

Back to top button
error: Content is protected !!