ಕ್ರೀಡೆ

ಉಡುಪಿ: ಬಾಡಿಗೆ ಮನೆಯಲ್ಲಿ ಕ್ರಿಕೆಟ್‌ ಬೆಟ್ಟಿಂಗ್, ದಂಪತಿ ಬಂಧನ

Views: 152

ಉಡುಪಿ:ಬಾಡಿಗೆ ಮನೆಯೊಂದರಲ್ಲಿ ಆಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್‌ ದಂಧೆ ನಡೆಸುತ್ತಿದ್ದವರನ್ನು  ಪೊಲೀಸರು ಪತ್ತೆಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪಿಪಿಸಿ ಸಮೀಪದ ಮನೆಯಲ್ಲಿ ಬಾಡಿಗೆಗೆ ಇದ್ದುಕೊಂಡು ಕ್ರಿಕೆಟ್‌ ಬೆಟ್ಟಿಂಗ್‌ ವೆಬ್‌ಸೈಟ್ ಮುಖಾಂತರ ಐಪಿಎಲ್ ಫೈನಲ್‌ ಪಂದ್ಯಾಟದ ಬಗ್ಗೆ ಸಾರ್ವಜನಿಕರಿಂದ ಹಣ ಸಂಗ್ರಹ ಮಾಡುತ್ತ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದರು.

ಈ ಬಗ್ಗೆ ಸೆನ್ ಠಾಣೆಯ ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ನೋಡಿದಾಗ ಅನಂತ ಪಿ. ಎಂಬಾತ ಆಕ್ರಮವಾಗಿ ಬೆಟ್ಟಿಂಗ್‌ ದಂಧೆ ನಡೆಸುತ್ತಾ ಬೇರೆ ಬೇರೆ ವ್ಯಕ್ತಿಗಳಿಗೆ ಕರೆ ಮಾಡಿ ಅವರವರ ತಂಡವನ್ನು ತಿಳಿಸಿ ಅವರಿಂದ ಹಣ ಸಂಗ್ರಹ ಮಾಡುತ್ತಿದ್ದ. ಸಿದ್ದಾರ್ಥ ಎಂಟರ್ ಪ್ರೈಸಸ್ ಸಂಸ್ಥೆಯ ಬ್ಯಾಂಕ್ ಖಾತೆ ಹಾಗೂ ಪೋನ್ ಪೇ ಮೂಲಕ ಹಣವನ್ನು ಪಣವಾಗಿಟ್ಟುಕೊಂಡಿದ್ದು, ಕ್ರಿಕೆಟ್ ಬೆಟ್ಟಿಂಗ್ ವ್ಯವಹಾರ ಮಾಡಲು ಉಡುಪಿಯ ಎಸ್‌ಬಿಐ ಬ್ಯಾಂಕ್‌ನಲ್ಲಿರುವ ತನ್ನ ಖಾತೆಯನ್ನು ಬಳಕೆ ಮಾಡುತ್ತಿದ್ದ. ಇತರರಿಗೆ ಬರಬೇಕಾದ ಲಾಭಾಂಶದ ಹಣ ಪಡೆಯಲು ಆತನ ಪತ್ನಿ ವಾಣಿಶ್ರೀ ಅವರ ಬ್ಯಾಂಕ್‌ ಖಾತೆಯನ್ನು ಉಪಯೋಗಿಸುತ್ತಿದ್ದ ಎನ್ನಲಾಗಿದೆ.

ಪೊಲೀಸರು ಅನಂತ ಮತ್ತು ಪತ್ನಿ ವಾಣಿಶ್ರೀ ಅವರ ಮೊಬೈಲ್‌ ವಶಪಡಿಸಿ ಕೊಂಡು ಬಂಧಿಸಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button