ಕರಾವಳಿ
ಉಡುಪಿ ಬಿಸಿಲಿನ ತಾಪ ತಾಳಲಾರದೆ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವು

Views: 340
ಉಡುಪಿ, : ರಾಜ್ಯದಾದ್ಯಂತ ತಾಪಮಾನ ಹೆಚ್ಚಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ ಈ ಮಧ್ಯೆ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದ ಬಳಿ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಮೃತರನ್ನು ಬದಿಯಪ್ಪ (37) ಎಂದು ಗುರುತಿಸಲಾಗಿದೆ. ವಿಪರೀತ ತಾಪಮಾನದಿಂದ ಬದಿಯಪ್ಪ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ಅವರನ್ನು ತಕ್ಷಣವೇ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ, ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಸಂಬಂಧ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಷ್ಣ ಮಾರುತದ ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದ ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು, ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಹಲವು ಭಾಗಗಳಿಗೆ ಹವಾಮಾನ ಇಲಾಖೆ ನಾಲ್ಕು ದಿನಗಳ ಉಷ್ಣ ಮಾರುತದ ಆರೆಂಜ್ ಅಲರ್ಟ್ ಘೋಷಿಸಿದೆ.






