ಕರಾವಳಿ
ಉಡುಪಿ, ಮಂಗಳೂರು, 5 ದಿನ ಮಳೆ ಮುನ್ಸೂಚನೆ ;ಆರೆಂಜ್ ಅಲರ್ಟ್ ಘೋಷಣೆ

Views: 175
ಉಡುಪಿ: ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಕರಾವಳಿಯ ಉಡುಪಿ, ಮಂಗಳೂರಿಗೆ ರಾಜ್ಯ ಹವಾಮಾನ ಇಲಾಖೆ ಸಿಹಿ ಸುದ್ದಿ ನೀಡಿದೆ. ಇಂದಿನಿಂದ ಐದು ದಿನಗಳ ಕಾಲ ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಐದು ದಿನ ಮಳೆಯಾಗಲಿದೆ. ಹಾಗಾಗಿ ಕರಾವಳಿ ಕರ್ನಾಟಕದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಭಾಗದಲ್ಲಿ ಮಳೆ ಮುನ್ಸೂಚನೆ ನೀಡಿರುವ ಹವಮಾನ ಇಲಾಖೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳದಂತೆ ಮೀನುಗಾರರಿಗೆ ಸೂಚನೆ ನೀಡಿದೆ.






