ಕರಾವಳಿ

ಉಡುಪಿ -ಮಣಿಪಾಲ: ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ: ಮೂವರ ಸೆರೆ

Views: 4

ಉಡುಪಿ: ಮಣಿಪಾಲದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ಉಡುಪಿ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಣಿಪಾಲದ ಸಿಂಡಿಕೇಟ್‌ ಸರ್ಕಲ್‌ ಬಳಿ ಇರುವ ಲಾಡ್ಜ್ ಒಂದರ ಕೊಠಡಿ ಸಂಖ್ಯೆ 101 ಮತ್ತು 102ರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಉಡುಪಿ ಮಹಿಳಾ ಪೊಲೀಸ್‌ ಠಾಣೆಯ ನಿರೀಕ್ಷಕ ಜಯಾನಂದ ಕೆ. ಅವರಿಗೆ ಬಂದ ಖಚಿತ ಮಾಹಿತಿ ಮೇರೆಗೆ ಅಲ್ಲಿಗೆ ದಾಳಿ ನಡೆಸಿದ್ದರು. ಈ ವೇಳೆ ಅಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಗಣೇಶ್‌, ಸುಧೀರ್‌ ಮತ್ತು ಮಾರುತಿಯನ್ನು ಬಂಧಿಸಿ ಕೃತ್ಯಕ್ಕೆ ಸಂಬಂಧಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇಬ್ಬರು ಸಂತ್ರಸ್ತೆಯರನ್ನು ರಕ್ಷಿಸಲಾಗಿದೆ. ಆರೋಪಿಗಳು ಜಗದೀಶ ಯಾನೆ ಜಗ್ಗ ಎನ್ನುವಾತನೊಂದಿಗೆ ಸೇರಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button