ಇತರೆ
ಉಡುಪಿ: ಮಲ್ಪೆಯಲ್ಲಿ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ

Views: 1
ಉಡುಪಿ: ನಾಲ್ವರನ್ನು ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದಿದೆ.
ಮುಸ್ಲಿಂ ಸಮುದಾಯದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಜಳು ಹತ್ಯೆಯಾದವರು.
ಘಟನೆಯ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕೊಲೆಯಾದವರನ್ನು ಹಸೀನಾ (46 ವ), ಅಫ್ನಾನ್ (23 ವ), ಅಯ್ನಾಝ್ (21 ವ), ಆಸಿಂ (12 ವ) ಎಂದು ಗುರುತಿಸಲಾಗಿದೆ. ಚೂರಿಯಿಂದ ಚುಚ್ಚಿ ಕೊಲೆಗೈಯಲಾಗಿದೆ.
ಘಟನಾ ಸ್ಥಳಕ್ಕೆ ಮಲ್ಪೆ ಪೊಲೀಸರು ಭೇಟಿ ನೀಡಿದ್ದು, ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳ ಸಹಿತ, ಮಾಹಿತಿ ಸಂಗ್ರಹಿಸುತ್ತಿದ್ದಾರೆ.






