ಕರಾವಳಿ

ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಅವರ ಮೊದಲ ಪತ್ನಿ ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣ:ಅತುಲ್ ರಾವ್ ಆರೋಪ ಮುಕ್ತ 

Views: 234

ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಅವರ ಮೊದಲ ಪತ್ನಿ ಪದ್ಮಪ್ರಿಯಾ ಅವರು ಜೂನ್ 10, 2008ರಂದು ಮಾರುತಿ ವ್ಯಾಗನ್ ಕಾರಿನಲ್ಲಿ ಸ್ವತಃ ಡ್ರೈವ್ ಮಾಡಿಕೊಂಡು ತವರಿಗೆ ಹೊರಟ  ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ನಿಗೂಢವಾಗಿ ಕಣ್ಣರೆಯಾಗಿದ್ದರು. ಶಾಸಕರ ಪತ್ನಿ ನಾಪತ್ತೆಯಾಗಿರುವುದು ದೇಶಾದ್ಯಂತ ಭಾರೀ ಚರ್ಚೆಗೆ ಒಳಗಾಗಿತ್ತು. ದೆಹಲಿಯ ಅಪಾರ್ಟ್ಮೆಂಟ್ ವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು.

ರಘುಪತಿ ಭಟ್ ಅವರ ಬಾಲ್ಯ ಸ್ನೇಹಿತ ಅತುಲ್ ರಾವ್ ನಕಲಿ ದಾಖಲೆ ಸೃಷ್ಟಿಸಿ ಮೋಸ ಮಾಡಿರುವ ಬಗ್ಗೆ 2008ರ ಜೂನ್ 19ರಂದು ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಕುರಿತು ತನಿಖೆ ನಡೆಸಿದ ಸಿಓಡಿ ಅಧಿಕಾರಿಗಳು ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು

ಪದ್ಮಪ್ರಿಯ ನಾಪತ್ತೆ ಹಾಗೂ ಆತ್ಮಹತ್ಯೆ ಪ್ರಕರಣದ ಆರೋಪಿ ಅತುಲ್ ರಾವ್ ಖುಲಾಸೆಗೊಂಡಿದ್ದಾರೆ. ಜಿಲ್ಲಾ ಎರಡನೆ ಹೆಚ್ಚುವರಿ ನ್ಯಾಯಾಲಯ ಖುಲಾಸೆಗೊಳಿಸಿ ತೀರ್ಪು ನೀಡಿದೆ.

ಉಡುಪಿ ಸಿಜೆಎಂ ನ್ಯಾಯಾಲಯ 2023 ನವೆಂಬರ್ 10 ರಂದು ಆರೋಪಿ ಅತುಲ್ ಗೆ ಒಂದು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಇದರ ವಿರುದ್ಧ ಅತುಲ್ ರಾವ್ ಜಿಲ್ಲಾ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ದಿನೇಶ ಹೆಗ್ಡೆ ಆರೋಪಿ ಅತುಲ್ ಅವರನ್ನು ದೋಷ ಮುಕ್ತಗೊಳಿಸಿ ಆದೇಶ ನೀಡಿದರು. ಆರೋಪಿ ಪರ ನ್ಯಾಯವಾದಿಗಳಾದ ಅರುಣ್ ಬಂಗೇರ್ ಹಾಗೂ ಸ್ಟೀವನ್ ಲೂಯಿಸ್ ವಾದ ಮಂಡಿಸಿದ್ದರು.

Related Articles

Back to top button
error: Content is protected !!