ಯುವಜನ

ಉಡುಪಿ: ಯುವ ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ

Views: 204

ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ನಡೆದಿದೆ.

ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ.

ಪವಿತ್ರ ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ವೇಳೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

 

Related Articles

Back to top button
error: Content is protected !!