ಕರಾವಳಿ
ಉಡುಪಿ :ರೈಲಿನಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ಪ್ರಯಾಣಿಕ ಸಾವು

Views: 103
ಉಡುಪಿ: ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಿಲುಗಡೆ ಪಡೆದ ರೈಲಿನ ಬೋಗಿಯೊಳಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಪ್ರಯಾಣಿಕನನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ ಆತ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಬೆಂಗಳೂರಿನಿಂದ ಕಾರವಾರಕ್ಕೆ ತೆರಳುವ ರೈಲು ಫ್ಲಾಟ್ ಫಾರ್ಮ್ ಸಂಖ್ಯೆ ಒಂದರಲ್ಲಿ ನಿಲುಗಡೆ ಪಡೆದಿತ್ತು. ಸ್ಥಳ ಸಂಖ್ಯೆ 23 ರಲ್ಲಿದ್ದ ಬೋಗಿಯೊಳಗೆ ಪ್ರಜ್ಞಾಹಿನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ಗಮನಿಸಿದ ಡಾ| ಸ್ಟಿವನ್ ಜಾರ್ಜ್ ತುರ್ತಾಗಿ ಆಸ್ಪತ್ರೆಗೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವು ಪಡೆದಿದ್ದರು. ರೈಲ್ವೇ ಇನ್‌ಸ್ಪೆಕ್ಟರ್ ಮಧುಸೂದನ್ ಸಮಕ್ಷಮದಲ್ಲಿ ಯೋಗೀಶ್, ಗಣೇಶ್, ಮಂಜುನಾಥ, ಶ್ರೀಲತಾ ಅವರ ಸಹಕಾರದಿಂದ ಬೋಗಿಯೊಳಗಿನಿಂದ ವ್ಯಕ್ತಿಯನ್ನು ಹೊರ ತೆಗೆದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು.






