ರಾಜಕೀಯ
ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ ಎಸ್ಐಟಿ ಗೆ ವಹಿಸುವ ಪ್ರಶ್ನೆ ಉದ್ಭವಿಸುವುದಿಲ್ಲ: :ಸಿಎಂ ಸಿದ್ದರಾಮಯ್ಯ

Views: 0
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದು ಮೊದಲ ಭಾರಿಗೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿ ಮಳೆ ಹಾನಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.
ಮಂಗಳವಾರ ಬೆಳಿಗ್ಗೆ ಮಂಗಳೂರು ಎರ್ಪೋರ್ಟ್ ಗೆ ಬಂದಿಳಿದಾಗ ಮಾಧ್ಯಮದವರೊಂದಿಗೆ ಮಾತನಾಡಿ, ಉಡುಪಿ ನೇತೃ ಜ್ಯೋತಿ ಕಾಲೇಜಿನ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಪೊಲೀಸರು ಸುಮೋಟೋ ಎಫ್ಐಆರ್ ದಾಖಲು ಮಾಡಿದ್ದಾರೆ. ಈ ಪ್ರಕರಣವನ್ನು ಎಸ್ಐಟಿ ಗೆ ವಹಿಸುವ ಪ್ರಶ್ನೆ ಉದ್ಭವಿಸುವುದಿಲ್ಲ.ತನಿಖೆ ಪ್ರಗತಿಯಲ್ಲಿದೆ. ಮಹಿಳಾ ಆಯೋಗವೇ ಅಲ್ಲಿ ಕ್ಯಾಮೆರಾ ಇಟ್ಟಿರಲಿಲ್ಲ ಎಂದಿದ್ದಾರೆ. ತನಿಖಾ ವರದಿ ಬಂದಮೇಲೆ ಈ ಬಗ್ಗೆ ಮಾತನಾಡುತ್ತೇನೆ ಎಂದಿದ್ದಾರೆ.






