ಯುವಜನ
ಉಡುಪಿ: ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

Views: 473
ಉಡುಪಿ: ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಿಸದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವತಿ.
ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತಿದ್ದರು. ಇವರಿಗೆ ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.






