ಶಿಕ್ಷಣ

ಉಡುಪಿ: ಶಾಲಾ ಬಸ್ ಚಾಲನೆ ಮಾಡುವಾಗ  ಚಾಲಕನಿಗೆ ಹೃದಯಾಘಾತ :ಪ್ರಾಣಾಪಾಯದಿಂದ ಪಾರಾದ ಮಕ್ಕಳು!!

Views: 202

ಉಡುಪಿ: ಬ್ರಹ್ಮಾವರದ ಖಾಸಗಿ ಶಾಲೆಯೊಂದರ ಮಕ್ಕಳನ್ನು ಮಣಿಪಾಲದತ್ತ ಕರೆದುಕೊಂಡು ಬರುವಾಗ ದಾರಿ ಮದ್ಯೆ ಚಾಲಕ ಲಘು ಹೃದಯಾಘಾತಕ್ಕೆ ಒಳಗಾಗಿದ್ದು, ಆತನ ಸಮಯ ಪ್ರಜ್ಞೆಯಿಂದ ಹಲವು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪೆರಂಪಳ್ಳಿಯಲ್ಲಿ ಸಂಭವಿಸಿದೆ. ಆದರೆ ಚಾಲಕ ಇಂದು ಬೆಳಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.

ಬಸ್ ಚಾಲಕ ಪೇತ್ರಿ ನಿವಾಸಿ ಆಲ್ವಿನ್ ಡಿ ಸೋಜ(53)  ಮೃತಪಟ್ಟವರು.

ಸುಮಾರು 65 ಮಕ್ಕಳನ್ನು ಕರೆದುಕೊಂಡು ಬಸ್ ಬ್ರಹ್ಮಾವರದಿಂದ ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲಕ್ಕೆ ಹೋಗುತ್ತಿತ್ತು. ದಾರಿ ಮಧ್ಯೆ ಐವರು ಮಕ್ಕಳ ಇಳಿಸಿದ ಬಸ್, ಪೆರoಪಳ್ಳಿ ತಿರುವಿನ ಬಳಿ ಈ ಅವಘಡ ಸಂಭವಿಸಿದೆ. ಕೂಡಲೇ ಎಚ್ಚೆತ್ತ ಚಾಲಕ ಬಸ್ಸನ್ನು ರಸ್ತೆಯ ಬದಿಯ ಚರಂಡಿಗೆ ಸರಿಸಿ ನಿಲ್ಲಿಸಿದರು.

ತೀವ್ರವಾಗಿ ಅಸ್ವಸ್ಥರಾಗಿರುವ ಚಾಲಕ ಆಲ್ವಿನ್ ಡಿಸೋಜ ಮಣಿಪಾಲ ಆಸ್ಪತ್ರೆಗೆ ದಾಖಲಿ ಸಲಾಗಿದೆ. ಘಟನೆಯಿಂದ ಕೆಲವು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button