ಶಿಕ್ಷಣ
ಉಡುಪಿ: ಶಾಲಾ ಶಿಕ್ಷಕಿ ನಿಧನ
Views: 160
ಕನ್ನಡ ಕರಾವಳಿ ಸುದ್ದಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಣಿಪಾಲದ ಶಿಕ್ಷಕಿಯೋರ್ವರು ನಿಧನರಾಗಿದ್ದಾರೆ. ಇಲ್ಲಿನ ಮಾಧವ ಕೃಪಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪಲ್ಲವಿ ಭಟ್(34) ಅವರು ಚಿಕಿತ್ಸೆ ಫಲಿಸದೆ ನಿಧನ ಹೊಂದಿದರು. ಆಟೊ ಇಮ್ಯುನೋ ಖಾಯಿಲೆಯಿಂದಾಗಿ ಒಂದು ವಾರದ ಹಿಂದೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಇವರು ಮಾಧವ ಕೃಪಾ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶಿಕ್ಷಕಿಯ ಅಕಾಲಿಕ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.






