ಶಿಕ್ಷಣ

ಉಡುಪಿ :ಶಿರ್ವ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿರುವ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ!

Views: 136

ಶಿರ್ವ : ಪೈಜಲ್‌ ಇಸ್ಲಾಂ ಎಜುಕೇಶನ್‌ ಸಂಸ್ಥೆ ಶಿರ್ವದಲ್ಲಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿದೆ.

ನಾಪತ್ತೆಯಾದ ವಿದ್ಯಾರ್ಥಿಗಳನ್ನು ಬಿಹಾರ ರಾಜ್ಯದ ವಿದ್ಯಾರ್ಥಿಗಳಾದ ತಬಾರಕ್‌, ಜಮ್‌ ಶೇಡ್‌, ತಂಜೀರ್‌ ಆಲ್‌ಮ್‌, ಶಾಹಿಲ್ ಎಂದು ಗುರುತಿಸಲಾಗಿದೆ.

ಪೈಜಲ್‌ ಇಸ್ಲಾಂ ಎಜುಕೇಶನ್‌ ಟ್ರಸ್ಟ್‌ ಶಿರ್ವ ಸಂಸ್ಥೆಯಲ್ಲಿ ಕಲಿಯುತ್ತಿದ್ದ ಈ ವಿದ್ಯಾರ್ಥಿಗಳು ಮೇ 14 ರಂದು ಮಧ್ಯಾಹ್ನ 2:30 ಗಂಟೆಯಿಂದ ಮಧ್ಯಾಹ್ನ 3:30 ಗಂಟೆಯ ನಡುವಿನ ಅವಧಿಯಲ್ಲಿ ನಾಪತ್ತೆಯಾಗಿದ್ದಾರೆ.

ಈ ಕುರಿತು ಪರ್ವೇಜ್‌ ಸಲೀಂ ಎಂಬುವವರು ನೀಡಿದ ದೂರಿನ ಪ್ರಕಾರ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!