ಜನಮನ
ಉಡುಪಿ :ಶೌಚಾಲಯದಲ್ಲಿ ವಿಡಿಯೋ ಶೂಟ್ ಜುಲೈ 27ರಂದು ರಾಜ್ಯ ವ್ಯಾಪಿ ಹೋರಾಟ

Views: 1
ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಶೂಟ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿದ್ಯಾರ್ಥಿನಿಯರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರವನ್ನು ಒತ್ತಾಯಿಸಿ ಬಿಜೆಪಿ ಜುಲೈ 27ರಂದು ರಾಜ್ಯ ವ್ಯಾಪಿ ಹೋರಾಟ ನಡೆಸುವುದಾಗಿ ತಿಳಿಸಿದೆ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದರು.
ಈ ಕೃತ್ಯ ನಡೆಸಿದ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ್ದನ್ನು ಬಿಟ್ಟರೆ ಬೇರೆ ಯಾವುದೇ ಕ್ರಮ ಕೈಗೊಂಡಿಲ್ಲ ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಈ ಕೃತ್ಯ ಎಸಗಿರುವ ವಿದ್ಯಾರ್ಥಿಗಳನ್ನು ಕೂಡಲೇ ಬಂಧಿಸಬೇಕು ಎಂದು ಅಗ್ರಹಿಸಿದರು.






