ಕರಾವಳಿ

ಉಡುಪಿ ಶ್ರೀಕೃಷ್ಣ ಮಠದ ಬಳಿ ಬಾವಿಗೆ ಬಿದ್ದ ಪ್ರವಾಸಿಗನ ರಕ್ಷಣೆ 

Views: 57

ಉಡುಪಿ, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲೆಂದು ಆಗಮಿಸಿದ್ದ ಪ್ರವಾಸಿಗನೊಬ್ಬ ಆಯತಪ್ಪಿ ಬಾವಿಗೆ ಬಿದ್ದ ಘಟನೆ ನಡೆದಿದೆ.

ಬಾಗಲಕೋಟೆ ಮೂಲದ ಸಂತೋಷ್ ಎಂಬಾತ ಮಠದ ಸಮೀಪದ ಶಿರಬೀಡು ಬಳಿ ಇರುವ ಬಾವಿ ಮೇಲೆ ಕುಳಿತುಕೊಂಡಿದ್ದಾಗ ಆಯತಪ್ಪಿ ಬಾವಿಯೊಳಗೆ ಬಿದ್ದಿದ್ದಾನೆ. ನೀರು ಕಡಿಮೆ ಇದ್ದಿದ್ದರಿಂದ ಸಂತೋಷ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯರು ಹಗ್ಗದ ಸಯಾದಿಂದ ಸಂತೋಷ್​ನನ್ನು ಮೇಲಕ್ಕೆತ್ತಲು ಯಶಸ್ವಿಯಾಗಿದ್ದಾರೆ.ಬಾವಿಗೆ ರಭಸವಾಗಿ ಬಿದ್ದ ಪರಿಣಾಮ ಸಂತೋಷ್‌ ಗಾಯಗೊಂಡಿದ್ದು, ಕೂಡಲೇ ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.

Related Articles

Back to top button
error: Content is protected !!