ಕರಾವಳಿ
ಉಡುಪಿ ಶ್ರೀ ಕೃಷ್ಣನ ದರ್ಶನ ಪಡೆದ ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ

Views: 28
ಉಡುಪಿ:ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಅವರು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದರು.
ನಟಿ ಸಾಯಿ ಪಲ್ಲವಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ದ ಕೆಲವು ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಖಾಸಗಿ ಕಾರ್ಯ ನಿಮಿತ್ತ ಕರಾವಳಿಗೆ ಬಂದಿರುವ ಚಿತ್ರನಟಿ ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಪಡೆದಿದ್ದಾರೆ.ನಂತರ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾ ವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು.
ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು.