ಇತರೆ

ಉಡುಪಿ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಗಳ ಬಂಧನ

Views: 48

ಕನ್ನಡ ಕರಾವಳಿ ಸುದ್ದಿ: ಮಲ್ಪೆ ಬೀಚ್‌ನಲ್ಲಿ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯಕ್ಕೆ ಹಾಜರಾಗದೇ ಕಳೆದ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳಾದ ಆಶಾ ಯಾನೆ ಸುಮಿತ್ರ ಕೃಷ್ಣ, ಮತ್ತು ರೇಖಾ ದಾನಪ್ಪ ಅವರನ್ನು ಮಲ್ಪೆ ಪೊಲೀಸರು  ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರವತಿಯ ಹೊಸ ಮನೆ ಎಂಬಲ್ಲಿ ಈ ಇಬ್ಬರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಸಿಜೆಎಂ ನ್ಯಾಯಧೀಶರ ಮುಂದೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಸ್ತುತ ಅವರನ್ನು ಮಂಗಳೂರು ಕಾರಾಗೃಹಕ್ಕೆ ಹಾಜರುಪಡಿಸಲಾಗಿದೆ.

Related Articles

Back to top button
error: Content is protected !!