ಯುವಜನ
ಉಡುಪಿ: 16 ವರ್ಷದ ಬಾಲಕಿ ನಾಪತ್ತೆ
Views: 41
ಉಡುಪಿ: ಇಲ್ಲಿನ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾದ ಪ್ರೀತಿ (16) ಎಂಬ ಬಾಲಕಿಯೊಬ್ಬರು ಮೇ 22 ರಿಂದ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.
ನಾಪತ್ತೆಯಾಗಿರುವ ಬಾಲಕಿಯು ಸುಮಾರು 5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ ಹಾಗೂ ಸಾಧಾರಣ ಶರೀರವನ್ನು ಹೊಂದಿದ್ದು, ಕನ್ನಡ, ಇಂಗ್ಲಿಷ್ ಮತ್ತು ತುಳು ಭಾಷೆಗಳನ್ನು ಮಾತನಾಡ ಬಲ್ಲವರಾಗಿದ್ದಾರೆ.
ಈ ಬಾಲಕಿಯ ಬಗ್ಗೆ ಯಾವುದೇ ಸುಳಿವು ಅಥವಾ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ತಕ್ಷಣವೇ ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬೇಕಾಗಿ ಉಡುಪಿ ಮಹಿಳಾ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ವಿನಂತಿಸಿದೆ.
ಸಂಪರ್ಕಿಸಬೇಕಾದ ಸಂಖ್ಯೆಗಳು:
ಉಡುಪಿ ಕಂಟ್ರೋಲ್ ರೂಂ: 0820-2526444
ಪೊಲೀಸ್ ಇನ್ಸ್‌ಪೆಕ್ಟರ್ (PI): 9480805458
2 (PSI): 8277988949, 8277988950
ಉಡುಪಿ ಮಹಿಳಾ ಪೊಲೀಸ್ ಠಾಣೆ: 0820-2525599






