ಇತರೆ
ಉತ್ತರಪ್ರದೇಶ: ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ, 10 ಮಂದಿ ಸಾವು

Views: 38
ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ಕಾರ್ಮಿಕರನ್ನು ತುಂಬಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ನಿಯಂತ್ರಣ ತಪ್ಪಿದ ಟ್ರಕ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತಪಟ್ಟವರೆಲ್ಲರೂ ವಾರಾಣಸಿ ನಿವಾಸಿಗಳು ಎಂದು ತಿಳಿದುಬಂದಿದೆ.






