ಉತ್ತರ ಕನ್ನಡ ವರುಣನ ಆರ್ಭಟಕ್ಕೆ ಗುಡ್ಡ ಕುಸಿದು 7 ಜನ ದಾರುಣ ಸಾವು

Views: 161
ಉತ್ತರ ಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟಕ್ಕೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ಹೆದ್ದಾರಿ ಸಮೀಪ ಬೃಹತ್ ಗಾತ್ರದ ಗುಡ್ಡ ಕುಸಿದು 7 ಜನ ಸಾವನ್ನಪ್ಪಿರುವ ದಾರುಣ ಘಟನೆ ಸಂಭವಿಸಿದೆ.
ಭಾರೀ ಸುರಿಯುತ್ತಿರುವ ಮಳೆಯಿಂದಾಗಿ ನೋಡ ನೋಡುತ್ತಿದ್ದಂತೆ ಗುಡ್ಡ ಕುಸಿದು 9 ಜನ ಮಣ್ಣಿನ ಅಡಿಯಲ್ಲಿ ಸಿಕ್ಕಿ ಹಾಕಿಕೊಂಡರು. ಆದರೆ, ಈಗ 9 ಜನರ ಪೈಕಿ 7 ಜನ ಸಾವಿಗೀಡಾಗಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಗುಡ್ಡ ಕುಸಿತ ಪ್ರಕರಣದಲ್ಲಿ ಒಂದೇ ಕುಟುಂಬದವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಲಕ್ಷ್ಮಣ ನಾಯಕ, ಶಾಂತಿ ನಾಯಕ, ರೋಷನ್, ಆವಂತಿಕ, ಜಗನ್ನಾಥ್ ಇದ್ದಾರೆ ಎಂದು ಹೇಳಲಾಗಿದೆ.ಸುದ್ದಿ ತಿಳಿಯುತ್ತಿದ್ದಂತೆ ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಭಾರಿ ಗಾತ್ರದ ಗುಡ್ಡ ಕುಸಿದು ಬಿದ್ದಿದ್ದರಿಂದ ರಾಶಿ ರಾಶಿ ಮಣ್ಣು ಬಿದ್ದಿದೆ. ಮಣ್ಣನ್ನು ತೆರವುಗೊಳಿಸಲು ಪರಿಹಾರ ತಂಡ ಅವಿರತವಾಗಿ ಶ್ರಮಿಸುತ್ತಿದೆ.ಗುಡ್ಡ ಕುಸಿದ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಉರುಳಿ ಬಿದ್ದಿದೆ. ಶಿರೂರಿನ ಬೊಮ್ಮಯ್ಯ ದೇವಾಲಯದ ಬಳಿ ಗುಡ್ಡ ಕುಸಿದು ಟೀ ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ.
ಗುಡ್ಡ ಕುಸಿತ ಸಂಭವಿಸುವ ವೇಳೆ ಕಾರಿನಲ್ಲಿದ್ದ ಒಂದು ಕುಟುಂಬ ಕಾರನ್ನು ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದರು ಎಂದು ದುರ್ಘಟನೆಯ ಪ್ರತ್ಯಕ್ಷದರ್ಶಿ ರಾಜು ತಿಳಿಸಿದ್ದಾರೆ.ಕಾರವಾರದ ಶಿರೂರಿನಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 9 ಮಂದಿ ನಾಪತ್ತೆಯಾಗಿದ್ದಾರೆ. ಗುಡ್ಡು ಕುಸಿಯುವ ವೇಳೆ ವೇಳೆ ಕಾರಿನಲ್ಲಿದ್ದ ಒಂದು ಕುಟುಂಬ ಕಾರನ್ನು ಹಿಂದಕ್ಕೆ ತೆಗೆದುಕೊಳ್ಳುತ್ತಿದ್ದರು. ಇದೇ ಸಮಯದಲ್ಲಿ ಗುಡ್ಡ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿ ರಾಜು ಮಾಹಿತಿ ನೀಡಿದ್ದಾರೆ